ಶಿಡ್ಲಘಟ್ಟ: ಪಟ್ಟಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಪ್ರತಿಭಾ ಪುರಸ್ಕಾರ
ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಪ್ರೊ ಡಾ. ಕೊಡಿರಂಗಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ಶನಿವಾರ ಮಧ್ಯಾಹ್ನ 12:00 ಸುಮಾರುನಲ್ಲಿ ನಗರದ ನಗರೇಶ್ವರ ಕಲ್ಯಾಣ ಮಂಟಪದಲ್ಲಿ ಶಿಡ್ಲಘಟ್ಟ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಿತು ಶಿಡ್ಲಘಟ್ಟ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಅಧ್ಯಕ್ಷ ಅನಂತ ಕೃಷ್ಣ ಅವರು ಪಟೇಲ್, ನಾರಾಯಣಸ್ವಾಮಿಯವರಿಗೆ ಪರಿಷತ್ತಿನ ಧ್ವಜವನ್ನ ನೀಡುವ ಮೂಲಕ ತಮ್ಮ ಅಧಿಕಾರವನ್ನು ಹಸ್ತಾಂತರ ಮಾಡಿದರು. ಶಾಸಕ ರವಿಕುಮಾರ್ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಪ್ರೊ ಡಾ. ಕೋಡಿ ರಂಗಪ್ಪ ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.