ಹಾವೇರಿ: ಗಾಂಧೀಜಿ ಮತ್ತು ಶಾಸ್ತ್ರೀಜಿ ದೇಶಕ್ಕಾಗಿ ಜೀವನವನ್ನು ಮುಡುಪಾಗಿಟ್ಟು ಸೇವೆ ಸಲ್ಲಿಸಿದ್ದಾರೆ; ನಗರದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ
Haveri, Haveri | Oct 2, 2025 ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ ಶಾಸ್ತ್ರೀ ಉಭಯ ಮಹನೀಯರು ದೇಶಕ್ಕಾಗಿ ತಮ್ಮ ಜೀವನವನ್ನು ಮುಡಿಪಿಟ್ಟು ಸೇವೆ ಸಲ್ಲಿಸಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ ಹೇಳಿದರು. ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಗುರುವಾರ ಮಹಾತ್ಮಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ ಶಾಸ್ತ್ರಿಜೀಯವರ ಜನ್ಮದಿನ ಪ್ರಯುಕ್ತ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ಸ್ವಾತಂತ್ರ್ಯ ಚಳುವಳಿಯಲ್ಲಿ ಮಹಾತ್ಮ ಗಾಂಧೀಜಿ ಉಪವಾಸ ಸತ್ಯಾಗ್ರಹಗಳ ಮೂಲಕ ಜನರಲ್ಲಿ ಸ್ವಾತಂತ್ರ್ಯದ ಕಿಚ್ಚನ್ನು ಹೆಚ್ಚಿಸಿದ್ದಾರೆ ಎಂದರು.