ಬೆಳಗಾವಿ: ಇಂದು ಮಧ್ಯಾಹ್ನ 12ಗಂಟೆಯಿಂದ ರಾತ್ರಿ 12ರ ವರೆಗೆ ನಿಷೇಧಾಜ್ಞೆ ಜಾರಿ ಮಾಡಿದ್ದೇವೆ:ನಗರದಲ್ಲಿ ಪೊಲೀಸ್ ಆಯುಕ್ತ ಭೂಷನ್ ಬೊರಸೆ
ಬೆಳಗಾವಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಮತದಾನ ಹಿನ್ನಲೆ ಇಂದು ರವಿವಾರ 1 ಗಂಟೆಗೆ ಬೆಳಗಾವಿ ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ಮಾತನಾಡಿ ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿ ಚುನಾವಣೆ,ಮತ ಎಣಿಕೆ ನಡೆಯುತ್ತಿದೆ ಬಿ.ಕೆ ಮಾಡೆಲ್ ಸ್ಕೂಲ್ ನಲ್ಲಿ ಮತದಾನ ನಡೆಯುತ್ತಿದೆ ಯಾವುದೇ ಅಹಿತಕರ ಘಟನೆ ಆಗದಂತೆ ಇಂದು ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 12ರ ವರೆಗೆ ನಿಷೇಧಾಜ್ಞೆ ಜಾರಿ ಮಾಡಿದ್ದೇವೆ ಸ್ಕೂಲ್ ನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಕೂಡಾ ಜಾರಿ ಮಾಡಲಾಗಿದೆ ಸಂಭ್ರಮಾಚರಣೆ ಮಾಡುವುದು, ಪಟಾಕಿ ಸಿಡಿಸುವುದಕ್ಕೆ ಅವಕಾಶ ಇರುವುದಿಲ್ಲ ಮತಗಟ್ಟೆ ಒಳಗೆ ಹಾಗೂ ಹೊರಗೆ ಐನೂರು ಪೊಲೀಸ್ ಸಿಬ್ಬಂದಿ ನೇಮಕ ಮಾಡಿದ್ದೇವೆ ಬೆಳಗ್ಗೆಯಿಂದ ಶಾಂತಿಯುತವಾಗಿ ಮತ ಎಣಿಕೆ ನಡೆಯುತ್ತಿದೆ ಎಂದು ತಿಳಿಸಿದರು.