ಹೊಳಲ್ಕೆರೆ: ಚಿತ್ರಹಳ್ಳಿ ಗ್ರಾಮದ ನೂತನ ಶಾಲಾ ಕೊಠಡಿಗಳ ನಿರ್ಮಾಣ ಕಾರ್ಯಕ್ಕ ಶಾಸಕ ಎಂ ಚಂದ್ರಪ್ಪ ಚಾಲನೆ
ಚಿತ್ರಹಳ್ಳಿ ಗ್ರಾಮದ ನೂತನ ಶಾಲಾ ಕೊಠಡಿಗಳ ನಿರ್ಮಾಣ ಕಾರ್ಯಕ್ಕ ಶಾಸಕ ಎಂ ಚಂದ್ರಪ್ಪ ಚಾಲನೆ ನೀಡಿದ್ದಾರೆ. ಮಂಗಳವಾರ ಬೆಳಗ್ಗೆ 11 ಗಂಟೆಗೆ ಹೊಳಲ್ಕೆರೆ ತಾಲ್ಲೂಕಿನ ಚಿತ್ರಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ನೂತನವಾಗಿ 2 ಹೆಚ್ಚುವರಿ ಕೊಠಡಿ ನಿರ್ಮಾಣದ ಕಾಮಗಾರಿಗೆ ಶಾಸಕ ಎಂ ಚಂದ್ರಪ್ಪ ಭೂಮಿ ಪೂಜೆ ಮಾಡುವ ಮೂಲಕ ಕಾಮಗಾರಿಗೆ ಚಾಲನೆ ನೀಡಿದ್ದು ಆದಷ್ಟು ಬೇಗ ಉತ್ತಮ ಗುಣಮಟ್ಟದ ಕಾಮಗಾರಿ ಮಾಡಿ ಮುಗಿಸುವಂತೆ ಇಲಾಖೆ ಅಧಿಕಾರಿಗಳಿಗೆ ಶಾಸಕ ಎಂ ಚಂದ್ರಪ್ಪ ಸೂಚನೆ ನೀಡಿದ್ದಾರೆ