ನಂಜನಗೂಡು: ನಗರದ ಗೌರಿಘಟ್ಟ ಬೀದಿಯಲ್ಲಿ ಮನೆ ಮನೆ ಮತದಾನ ಪ್ರಕ್ರಿಯೆ ಪ್ರಾರಂಭ; ಹಕ್ಕು ಚಲಾಯಿಸಿದ ಹಿರಿಯ ನಾಗರಿಕರು
ನಂಜನಗೂಡು: ಏ.13 ಇಂದಿನಿಂದ ಏ.18 ರವರೆಗೆ ಮನೆಮನೆ ಮತದಾನ ಪ್ರಕ್ರಿಯೆಗೆ ಇಂದು ಶನಿವಾರ ಬೆಳಿಗ್ಗೆ 11 ಗಂಟೆಯ ಸಮಯದಲ್ಲಿ ಚಾಲನೆ ನೀಡಲಾಗಿದೆ.ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದ ಚುನಾವಣೆಯ ಹಿನ್ನೆಲೆಯಲ್ಲಿ ನಂಜನಗೂಡು ನಗರದ ಗೌರಿ ಘಟ್ಟ ಬೀದಿಯಲ್ಲಿ ಚುನಾವಣಾ ಅಧಿಕಾರಿಗಳು ಮನೆ ಮನೆಗೆ ತೆರಳಿ ಮತದಾನ ಮಾಡಿಸಿದರು. ವರುಣ ಮತ್ತು ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಮನೆ ಮನೆ ಮತದಾನ ಪ್ರಕ್ರಿಯೆ ಪ್ರಾರಂಭ ಮಾಡಲಾಗಿದ್ದು, 85 ವರ್ಷ ಮೇಲ್ಪಟ್ಟ ಹಿರಿಯರು ಹಾಗೂ ಅಂಗವಿಕಲರಿಗೆ ಮನೆ ಮನೆ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ.