ಚಾಮರಾಜನಗರ: ನಗರದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಭಾವಚಿತ್ರ ಅದ್ಧೂರಿ ಮೆರವಣಿಗೆ- ಸಚಿವ ಮಧು ಬಂಗಾರಪ್ಪ, ಶಾಸಕ ಪುಟ್ಟರಂಗಶೆಟ್ಟಿ ಭಾಗಿ
ಚಾಮರಾಜನಗರ ಜಿಲ್ಲಾಡಳಿಯದ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಹಿನ್ನೆಲೆ ಚಾಮರಾಜನಗರದಲ್ಲಿ ನಾರಾಯಣಗುರುಗಳ ಭಾವಚಿತ್ರದ ಅದ್ಧೂರಿ ಮೆರವಣಿಗೆ ನಡೆಯಿತು. ಪ್ರವಾಸಿಮಂದಿರದಿಂದ ಹೊರಟ ಭಾವಚಿತ್ರದ ಮೆರವಣಿಗೆಯು ಜಾನಪದ ಕಲಾತಂಡಗಳ ಜೊತೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು. ಭುವನೇಶ್ವರಿ ವೃತ್ತಕ್ಕೆ ಮೆರವಣಿಗೆ ಬಂದ ವೇಳೆ ಮಂಗಳವಾರ ಮಧ್ಯಾಹ್ನ ಸುಮಾರಿಗೆ ಸಚಿವ ಮಧು ಬಂಗಾರಪ್ಪ, ಶಾಸಕ ಸಿ.ಪುಟ್ಟರಂಗಶೆಟ್ಟಿ ಜೊತೆಯಾದರು. ಮೆರವಣಿಗೆ ಉದ್ದಕ್ಕೂ ಯುವಕರು ಸಚಿವರ ಜೊತೆ ಫೋಟೋ ತೆಗೆಸಿಕೊಳ್ಳಲು ಮುಗಿಬಿದ್ದರು. ನಿಟ್ಟೂರು ಮಠದ ರೇಣುಕಾನಂದ ಸ್ವಾಮೀಜಿ ಇದ್ದರು.