ಇಂಡಿ: ಹೋರ್ತಿ ಗ್ರಾಮದಲ್ಲಿ ಸಿದ್ದ ಅಗ್ನಿಹೋತ್ರ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ
ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಹೊರ್ತಿ ಗ್ರಾಮದ ಶ್ರೀ ಜಗದ್ಗುರು ರೇಣುಕ ವಿಜಯ ಕಲ್ಯಾಣ ಮಂಟಪದಲ್ಲಿ ಭಾನುವಾರ ಸಾಯಂಕಾಲ 6ಗಂಟೆ ಸುಮಾರಿಗೆ ಶ್ರೀ ಸಿದ್ದಲಿಂಗೇಶ್ವರ ಗದ್ದುಗೆ ಮಠದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಿದ್ಧ ಅಗ್ನಿ ಹೋತ್ರ ಸಮಾರಂಭವನ್ನು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಸನಾತನ ಹಿಂದೂ ಧರ್ಮ ರಕ್ಷಣೆಗಾಗಿ ಮಠಾಧೀಶರು ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮಠಾಧೀಶರು ಭಕ್ತಾದಿಗಳು ಭಾಗಿಯಾಗಿದ್ದರು.