ನೆಲಮಂಗಲ: ತಾಲೂಕಿನ ಶಿವಗಂಗೆಯ ಮೇಲಣಗವಿ ಮಠದಲ್ಲಿ ರೇಣುಕಾಚಾರ್ಯ ಜಯಂತಿ ಆಚರಣೆ, ಶಿವಗಂಗಾ ಶ್ರೀ ಪ್ರಶಸ್ತಿ ಪ್ರಧಾನ ಯಶಸ್ವಿ
ಸೋಂಪುರ ಹೋಬಳಿಯ ಶಿವಗಂಗೆ ಬಳಿಯ ಶ್ರೀ ಮೇಲಣಗವಿ ವೀರಸಿಂಹಾಸನ ಸಂಸ್ಥಾನ ಮಠದಲ್ಲಿ ಭಾನುವಾರ ಶ್ರೀ ಜಗದ್ಗರು ರೇಣುಕಾಚಾರ್ಯ ಜಯಂತಿ ಮತ್ತು ಶಿವಗಂಗಾ ಶ್ರೀ ಪ್ರಶಸ್ತಿ ಪ್ರಧಾನ, ಹಾಗೂ ವಿದ್ಯಾರ್ಥಿ ನಿಲಯ ನೂತನ ಕಟ್ಟಡ ಉದ್ಘಾಟನೆ ಸಮಾರಂಭಕ್ಕೆ ದೀಪಬೆಳಗಿ ಚಾಲನೆ ನೀಡಿದರು. ಶಿವಗಂಗಾ ಶ್ರೀ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಎನ್.ಎಸ್. ನಟರಾಜು, ಈ ಪ್ರಶಸ್ತಿ ಜವಾಬ್ದಾರಿ ಹೆಚ್ಚಿಸಿದೆ, ನಮ್ಮ ಸಮುದಾಯಕ್ಕೆ ಈ ಪ್ರಶಸ್ತಿ ಸಂಪೂರ್ಣವಾಗಿ ಅರ್ಪಿಸುತ್ತೇನೆ ಎಂದರು. ಕಾರ್ಯಕ್ರಮದಲ್ಲಿ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ವಿಭೂತಿಪುರ ಮಠದ ಡಾ.ಮಹಾಂತಲಿಂಗ ಸ್ವಾಮೀಜಿ ಭಾಗಿಯಾದರು.