ಕಂಪ್ಲಿ: ಬಳ್ಳಾಪುರ ಗ್ರಾಮದ ವಿದ್ಯಾರ್ಥಿಗಳ ಬಸ್ ಸಮಸ್ಯೆಗೆ ಶಾಸಕ ಗಣೇಶ್ ಸ್ಪಂದನೆ
Kampli, Ballari | Sep 15, 2025 ಸೆಪ್ಟಂಬರ್ 15, ಸೋಮವಾರ ಮಧ್ಯಾಹ್ನ 12ಗಂಟೆಗೆ ಕಂಪ್ಲಿ ತಾಲ್ಲೂಕಿನ ಬಳ್ಳಾಪುರ ಗ್ರಾಮದಲ್ಲಿ ಬಸ್ಸಿನ ಅವ್ಯವಸ್ಥೆ ಎದುರಿಸುತ್ತಿದ್ದ ವಿದ್ಯಾರ್ಥಿಗಳು ಕಂಪ್ಲಿ ಶಾಸಕರ ಗೃಹ ಕಚೇರಿಗೆ ಭೇಟಿ ನೀಡಿ ತಮ್ಮ ಬೇಡಿಕೆಯನ್ನು ಮಂಡಿಸಿದರು.ವಿದ್ಯಾರ್ಥಿಗಳ ಸಮಸ್ಯೆಯನ್ನು ಆಲಿಸಿದ ಶಾಸಕರು ತಕ್ಷಣವೇ ಬಳ್ಳಾರಿಯ KSRTC ಡಿಪೋ ಡಿಸಿ ಅವರಿಗೆ ಫೋನ್ ಮೂಲಕ ಮಾಹಿತಿ ನೀಡಿ ಬಸ್ ಸೌಲಭ್ಯ ಒದಗಿಸುವಂತೆ ಸೂಚಿಸಿದರು. ಈ ಸಂದರ್ಭದಲ್ಲಿ ಕುರುಗೋಡು ಪುರಸಭೆ ಅಧ್ಯಕ್ಷ ಶೇಖಣ್ಣ, ಉಪಾಧ್ಯಕ್ಷ ಚನ್ನಪಟ್ಟಣ ಮಲ್ಲಿಕಾರ್ಜುನ್, ಸದಸ್ಯರಾದ ಓಂಕಾರಪ್ಪ, ಗುರುಮೂರ್ತಿ, ಕಲ್ಗುಡೆಪ್ಪ, ಕಾಂಗ್ರೆಸ್ ಮುಖಂಡರಾದ ಬಂಗಿ ಮಲ್ಲಯ್ಯ, ವಿ. ಮೌನೇಶ್ ಸೇರಿದಂತೆ ಅನೇಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.