2025ನೇ ಸಾಲಿನ 7ನೇ ವಲಯ ಮಟ್ಟದ ಪೊಲೀಸ್ ಕರ್ತವ್ಯ ಕೂಟದಲ್ಲಿ ಅತಿ ಹೆಚ್ಚು ಪ್ರಶಸ್ತಿಗಳನ್ನು ಪಡೆದು ಅತ್ಯುತ್ತಮ ತಂಡ ಪ್ರಶಸ್ತಿಯನ್ನು ಪಡೆದ ಕೋಲಾರ ಜಿಲ್ಲಾ ಪೊಲೀಸ್ ತಂಡ. 2025ನೇ ಸಾಲಿನ ವಲಯ ಮಟ್ಟದ ಪೊಲೀಸ್ ಕರ್ತವ್ಯ ಕೂಟವನ್ನು ಕೇಂದ್ರವಲಯದ ವತಿಯಿಂದ ಆಯೋಜನೆ ಮಾಡಿದ್ದು ವಿವಿಧ ವಿಭಾಗಗಳಲ್ಲಿ ನಮ್ಮ ಜಿಲ್ಲಾ ತಂಡದ ಅಧಿಕಾರಿಗಳು ಮತ್ತು ಸಿಬ್ಬಂದಿಯವರು ಅತ್ಯುತ್ತಮ ಪ್ರದರ್ಶನ ನೀಡಿದ್ದು, ಹಲವು ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ವಲಯದಲ್ಲಿ ಅತಿಹೆಚ್ಚು ಪ್ರಶಸ್ತಿ(ಅಂಕ)ಗಳನ್ನು ಪಡೆದಿದ್ದು ಈ ಸಾಧನೆ ಕೋಲಾರ ಜಿಲ್ಲೆಯ ಪೊಲೀಸ್ ಇಲಾಖೆಯ ಶಿಸ್ತಿನ ಕಾರ್ಯಪದ್ಧತಿ ಮತ್ತು ತರಬೇತಿಯ ಗುಣಮಟ್ಟವನ್ನು ಪ್ರತಿಬಿಂಬಿಸುತ್ತದೆ.