ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ವ್ಯಾಪ್ತಿಯಲ್ಲಿ ಈಗಾಗಲೇ ನಾಲ್ಕು ಜನರನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ವಿವಿಧ ಕಾರಾಗೃಹಗಳಿಗೆ ಕಳುಹಿಸಲಾಗಿದ್ದು ಇಂದು ಮತ್ತೆ ಇಬ್ಬರು ಆರೋಪಿಗಳನ್ನು ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದೆ. ರೆಹಮತ್ ಧಾರವಾಡ, ಮೊಹಮ್ಮದ್ ರಫೀಕ್ ಬಾರವಾಲೆ ಎಂಬ ಆರೋಪಿಗಳನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ಬೆಳಗಾವಿಯ ಕೇಂದ್ರ ಕಾರಾಗೃಹಕ್ಕೆ ಬಂಧನ ಆದೇಶ ಮಾಡಲಾಗಿದೆ.