ಶಿವಮೊಗ್ಗ: ವಿದ್ಯಾರ್ಥಿಗಳಿಗೆ ಬಸ್ ಪಾಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ನಗರದಲ್ಲಿ ಉಸ್ತುವಾರಿ ಸಚಿವರ ಕಚೇರಿ ಮುಂದೆ ಎಬಿವಿಪಿ ಪ್ರತಿಭಟನೆ
ವಿದ್ಯಾರ್ಥಿಗಳಿಗೆ ಬಸ್ ಪಾಸ್ ವ್ಯವಸ್ಥೆ ಸೇರಿದಂತೆ ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಆದರೆ ಸಿ ಶಿವಮೊಗ್ಗ ನಗರದ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ಮುಂಭಾಗ ಎಬಿವಿಪಿ ವತಿಯಿಂದ ಪ್ರತಿಭಟನೆಯನ್ನು ಮಾಡಲಾಯಿತು. ಗುರುವಾರ ಎಬಿವಿಪಿ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಶೈಕ್ಷಣಿಕ ವರ್ಷ ಪ್ರಾರಂಭವಾಗಿದ್ದು ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆ ಇಲ್ಲ, ಅಲ್ಲದೆ ಬಸ್ ವ್ಯವಸ್ಥೆ ಕೂಡ ಇಲ್ಲ.ಬಸ್ ಪಾಸ್ ವ್ಯವಸ್ಥೆ ಕೂಡ ಇಲ್ಲ. ಕೂಡಲೇ ರಾಜ್ಯ ಸರ್ಕಾರ ಈ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಪ್ರತಿಭಟನೆ ನಡೆಸಲಾಯಿತು.