ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಅಭಿವೃದ್ಧಿ ಅಪರ ಆಯುಕ್ತರಾದ ದಲ್ಜಿತ್ ಕುಮಾರ್ ರವರು ಗುರುವಾರ ಸಂಜೆ 4 ಗಂಟೆ ಸುಮಾರಿಗೆ ನಗರದ ಮಾಣಿಕ್ ಷಾ ಪರೇಡ್ ಗ್ರೌಂಡ್ ಗೆ ಭೇಟಿ ನೀಡಿ ಇದೇ ಜನವರಿ 26 ರಂದು ನಡೆಯುವ ರಾಜ್ಯಮಟ್ಟದ ಗಣರಾಜ್ಯೋತ್ಸವದ ಸಿದ್ಧತೆ ಬಗ್ಗೆ ಪರಿಶೀಲನೆ ನಡೆಸಿ, ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದರು ರಾಜ್ಯ ಮಟ್ಟದದಲ್ಲಿ ನಡೆಯುವ ಈ ಸಮಾರಂಭಕ್ಕೆ ಯಾವುದೇ ರೀತಿಯಲ್ಲಿ ಲೋಪದೋಷಗಳಾಗದಂತೆ ನೋಡಿಕೊಂಡು ಕಾರ್ಯನಿರ್ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.