ನಂಜನಗೂಡು: ಎಸ್. ಹೊಸಕೋಟೆ ಗ್ರಾಮದ ಶ್ರೀ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮ ಉದ್ಘಾಟಿಸಿದ ಪ್ರಾಂಶುಪಾಲೆ ಮಮತ
ನಂಜನಗೂಡು: ನಾವು ಗಳಿಸಿದ ಆಸ್ತಿ, ಅಂತಸ್ತು, ಸಂಪತ್ತು ಯಾವುದೂ ಕೊನೆಯವರೆಗೂ ಉಳಿಯೊಲ್ಲ. ಆದರೆ ಕಲಿತ ವಿದ್ಯೆ ಮಾತ್ರ ಕೊನೆಯವರೆಗೂ ಜೊತೆಗಿರುತ್ತದೆ ಎಂದು ವಿರಾಜಪೇಟೆಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರಾದ ಮಮತ ಹೇಳಿದರು. ನಂಜನಗೂಡು ತಾಲ್ಲೂಕಿನ ಎಸ್. ಹೊಸಕೋಟೆ ಗ್ರಾಮದಲ್ಲಿರುವ ಶ್ರೀ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯಲ್ಲಿ 2011-12ನೇ ಸಾಲಿನ ಹಿರಿಯ ವಿದ್ಯಾರ್ಥಿಗಳಿಂದ ಆಯೋಜನೆ ಮಾಡಲಾಗಿದ್ದ ಗುರುವಂದನಾ ಕಾರ್ಯಕ್ರಮವನ್ನು ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿದರು.