ಅಳ್ನಾವರ: ನರೇಗಾ ಯೋಜನೆಯಡಿ ಕೃಷಿ ಕಾರ್ಮಿಕರಿಗೆ ಕೆಲಸ ನೀಡುವಂತೆ ಆಗ್ರಹಿಸಿ ಕಂಬಾರಗಣವಿಯಲ್ಲಿ ರೈತ ಕೃಷಿ ಕಾರ್ಮಿಕ ಸಂಘಟನೆಯಿಂದ ಪ್ರತಿಭಟನೆ #localissue
ನರೇಗಾ ಯೋಜನೆಯಡಿ ರೈತ ಕೃಷಿ ಕಾರ್ಮಿಕರಿಗೆ ಕೆಲಸ ನೀಡಬೇಕು ಎಂದು ಆಗ್ರಹಿಸಿ ಕಂಬಾರಗಣವಿ ಗ್ರಾಮದಲ್ಲಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದರು. ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಪ್ರತಿಭಟನೆ ನಡೆಸಿ, ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಆಕ್ರೋಶ ವ್ಯಕ್ತಪಡಿಸಿದರು. ಬೆಲೆ ಏರಿಕೆಯಿಂದ ಜನರು ಜೀವನ ನಡೆಸುವುದು ಕಷ್ಟದಾಯಕವಾಗಿದೆ. ಕೂಡಲೇ ನರೇಗಾ ಯೋಜನೆಯಡಿ ಕೆಲಸ ನೀಡಬೇಕು ಹಾಗೂ ಬಾಕಿಯಿರುವ ನರೇಗಾ ಕೂಲಿ ಬಿಡುಗಡೆ ಮಾಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.