ಪ್ರವಾಹ ಸಂದರ್ಭದಲ್ಲಿ ಜನರ ರಕ್ಷಣೆಗಾಗಿ ಕೈಗೊಳ್ಳಬೇಕಾಗಿರುವ ಮುನ್ನಚ್ಚರಿಕೆ ಕ್ರಮಗಳು, ವಿಪತ್ತು ನಿರ್ವಹಣೆ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ನಗರದ ಕೃಷ್ಣಗಿರಿ ಬಡಾವಣೆ ಕೆರೆಯಲ್ಲಿ ಬುಧವಾರ 12 ಗಂಟೆಗೆ ಅಣುಕು ಪ್ರದರ್ಶನ ನಡೆಸಲಾಯಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಅಗ್ನಿಶಾಮಕದಳ, ಗೃಹರಕ್ಷಕ ದಳ ಹಾಗೂ ಪೊಲೀಸ್ ಇಲಾಖೆ ಸಹಯೋಗದಿಂದ ನಡೆದ ಅಣಕು ಪ್ರದರ್ಶನದಲ್ಲಿ, ವಿಪತ್ತು ಅಪಾಯಕ್ಕೆ ಸಿಲುಕಿರುವ ಜನರ ರಕ್ಷಣೆ ಮಾಡುವ ಕಾರ್ಯಾಚರಣೆಯ ಪ್ರಾತ್ಯಕ್ಷಿಕೆ ನಡೆಸಲಾಯಿತು.