ಶೋರಾಪುರ: ನಗರಸಭೆ ಆವರಣದಲ್ಲಿ ಶಾಸಕ ರಾಜಾ ವೇಣುಗೋಪಾಲ ನಾಯಕ ನೇತೃತ್ವದಲ್ಲಿ ಸಾಮಾನ್ಯ ಸಭೆ ಜರುಗಿತು
ನಗರದ ಪ್ರತಿಯೊಂದು ವಾರ್ಡ್ಗಳಲ್ಲಿ ಸ್ವಚ್ಛತೆಗೆ ಮೊದಲು ಆದ್ಯತೆ ನೀಡಬೇಕು ಎಂದು ಶಾಸಕ ರಾಜ ವೇಣುಗೋಪಾಲ್ ನಾಯಕ್ ಹೇಳಿದರು ನಗರಸಭೆ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿ ನಾವು ಹೇಗೆ ಮನೆ ಸ್ವಚ್ಛತೆ ಇಟ್ಟುಕೊಳ್ಳುತ್ತೇವೆ ಅದೇ ರೀತಿ ಚರಂಡಿಯಲ್ಲಿ ಕಸಕಡ್ಡಿ ಪ್ಲಾಸ್ಟಿಕ್ ಹಾಕದಂತೆ ಜಾಗೃತಿ ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು ನಗರದ ವಿವಿಧ ವಾರ್ಡುಗಳಲ್ಲಿ ಸಾರ್ವಜನಿಕರಿಗೆ ಯಾವುದೇ ರೀತಿಯಾಗಿ ಚರಂಡಿ ರಸ್ತೆ ಇನ್ನಿತರ ಸಂಸ್ಥೆ ಆಗದಂತೆ ನೋಡಿಕೊಳ್ಳುವಂತೆ ತಿಳಿಸಿದರು ಈ ಸಂದರ್ಭದಲ್ಲಿ ನಗರಸಭೆಯ ಅಧ್ಯಕ್ಷರು ಸದಸ್ಯರು ಭಾಗವಹಿಸಿದ್ದರು