ಜೋಯಿಡಾ : ತಾಲೂಕು ಕೇಂದ್ರದಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆಯುತ್ತಿರುವ ಜನಗಣತಿ 2027 ಪೂರ್ವ ಪರೀಕ್ಷಾ ಅಭ್ಯಾಸ ಗಣತಿದಾರರು ಹಾಗೂ ಮೇಲ್ವಿಚಾರಕರಿಗೆ ತರಬೇತಿ ಕಾರ್ಯಾಗಾರವು ಯಶಸ್ವಿಯಾಗಿ ನಡೆಯುತ್ತಿದೆ. . ಮೂರು ದಿನಗಳ ಈ ತರಬೇತಿ ಕಾರ್ಯಗಾರದಲ್ಲಿ ಬುಧವಾರ ಬೆಳಿಗ್ಗೆ 11.00 ಗಂಟೆ ಸುಮಾರಿಗೆ ಅಪರ ಜಿಲ್ಲಾಧಿಕಾರಿ ಸಾಜಿದ್ ಅಹಮ್ಮದ್ ಮುಲ್ಲಾ ಹಾಗೂ ಸಹಾಯಕ ಆಯುಕ್ತರಾದ ಪಿ ಶ್ರವಣ್ ಕುಮಾರ್ ಅವರು ಭಾಗವಹಿಸಿ, ಅಗತ್ಯ ಮಾಹಿತಿ ಮಾರ್ಗದರ್ಶನವನ್ನು ನೀಡಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಮಂಜುನಾಥ ಮುನ್ನೋಳ್ಳಿ ಉಪಸ್ಥಿತರಿದ್ದರು.