ಕುಶಾಲನಗರ: ಕೊಡಗಿನಲ್ಲಿ ಗುಡುಗು ಸಹಿತ ಭಾರಿ ಗಾಳಿ ಮಳೆ: ಹಲವೆಡೆ ಹಾನಿ, ವೃದ್ಧೆಗೆ ಗಾಯ
ಕೊಡಗು ಜಿಲ್ಲೆಯಾದ್ಯಂತ ಸುರಿದ ಭಾರಿ ಗಾಳಿ ಮಳೆಗೆ ಮನೆಗಳ ಶೀಟ್ ಹಾರಿ ಹಾನಿಯಾಗಿದೆ. ಕುಶಾಲನಗರದ ಗೊಂದಿ ಬಸವನಹಳ್ಳಿಯಲ್ಲಿ ವೃದ್ಧೆಯೊಬ್ಬರಿಗೆ ಗಾಯವಾಗಿದ್ದು, ಮರಗಳು ಬಿದ್ದು ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಜಿಲ್ಲೆಯಲ್ಲಿ ಇನ್ನು ಎರಡು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.