ಯಲ್ಲಾಪುರ ಪಟ್ಟಣದ ಶ್ರೀ ಗ್ರಾಮದೇವಿಯ ಜಾತ್ರಾಮಹೋತ್ಸವದ ಅಂಗವಾಗಿ ಪಟ್ಟಣದ ದೇವಿದೇವಾಲಯದ ಎದುರು ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ಪಟ್ಟಣದ ರಸ್ತೆಗಳ ಮರುಡಾಂಬರೀಕರಣ ಕಾಮಗಾರಿಗೆ ಶಾಸಕ ಶಿವರಾಮ್ ಹೆಬ್ಬಾರ ಅವರು ಬುಧವಾರ ಮಧ್ಯಾಹ್ನ 2ಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ಪಟ್ಟಣ ಪಂಚಾಯತ ಮಾಜಿ ಅಧ್ಯಕ್ಷರು,ಉಪಾಧ್ಯಕ್ಷರು, ಸದಸ್ಯರು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.