ಕುಮಟಾ ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಕೆ.ಡಿ.ಪಿ ಸಭೆ ಬುಧವಾರ ಸಂಜೆ 4.30ರವರೆಗೆ ಶಾಸಕ ದಿನಕರ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿಯಲ್ಲಿರುವ ಯೋಜನೆಗಳು, ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳು ಹಾಗೂ ಅವುಗಳ ಪ್ರಸ್ತುತ ಸ್ಥಿತಿಗತಿಯ ಬಗ್ಗೆ ಸಮಗ್ರವಾದ ವರದಿಯನ್ನು ಶಾಸಕರು ಪರಿಶೀಲನೆ ನಡೆಸಿದರು. ವಿವಿಧ ಅಭಿವೃದ್ಧಿ ಕಾರ್ಯಗಳಲ್ಲಿ ಲೋಪದೋಷ ಆಗದಂತೆ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.