ರವಿವಾರ ಬೆಂಗಳೂರಿನ ಕೆ.ಪಿ.ಸಿ.ಸಿ ಕಚೇರಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ 140ನೇ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಯಿತು. ತ್ಯಾಗ, ಸೇವೆ ಮತ್ತು ಜನಶಕ್ತಿಯ ಅಪ್ರತಿಮ ಪರಂಪರೆಯನ್ನು ಹೊಂದಿರುವ ಈ ಮಹಾನ್ ಸಂಘಟನೆಯ ಕಾರ್ಯಕ್ರಮದಲ್ಲಿ ಕೆ.ಪಿ.ಸಿ.ಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಹಾಗೂ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಭಾಗವಹಿಸುವ ಅವಕಾಶ ದೊರೆತಿತು. ದೇಶದ ಐಕ್ಯತೆ, ಪ್ರಜಾಪ್ರಭುತ್ವದ ರಕ್ಷಣೆ ಮತ್ತು ರಾಷ್ಟ್ರ ನಿರ್ಮಾಣಕ್ಕಾಗಿ ನಿರಂತರ ಹೋರಾಟ ನಡೆಸುತ್ತಿರುವ ಕಾಂಗ್ರೆಸ್ ಪಕ್ಷದ ಭಾಗವಾಗಿರುವುದಕ್ಕೆ ಅಪಾರ ಹೆಮ್ಮೆ ಅನಿಸುತ್ತದೆ. ನವ ಭಾರತದ ಉಜ್ವಲ ಭವಿಷ್ಯಕ್ಕಾಗಿ ಪಕ್ಷದ ಹೋರಾಟ ಸದಾ ಮುಂದುವರಿಯಲಿದೆ.