ಚಿತ್ರದುರ್ಗ: ಚಿತ್ರದುರ್ಗದಲ್ಲಿ ಪ್ರಧಾನಿ ಮೋದಿ ವಿರುದ್ದ ಯುವ ಕಾಂಗ್ರೆಸ್ ಪ್ರತಿಭಟನೆ
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು 2014ರಲ್ಲಿ ಪ್ರತಿ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇನೆಂದು ಈ ದೇಶದ ಯುವಕರಿಗೆ ಆಶ್ವಾಸನೆ ನೀಡಿ, ಪ್ರಧಾನಿ ಪಟ್ಟಕ್ಕೇರಿ ದೇಶದ ಯುವಕರಿಗೆ ಹಾಗೂ ನಿರುದ್ಯೋಗಿಗಳಿಗೆ ಅನ್ಯಾಯ ಮಾಡಿದ್ದಾರೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕಾರೇಹಳ್ಳಿ ಉಲ್ಲಾಸ್ ಕಿಡಿ ಕಾರಿದರು. ಚಿತ್ರದುರ್ಗ ನಗರದ ಕಾಂಗ್ರೆಸ್ ಕಚೇರಿಯ ಮುಂಭಾಗ ಕಾರ್ಯಕರ್ತರ ಜೊತೆ ಸೇರಿಕೊಂಡು ಪಕೋಡ ಮಾಡಿ ಮಾರಾಟ ಮಾಡುವ ಮೂಲಕ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಮಾತನಾಡಿ, ಮೋದಿ ಹೇಳಿದಂತೆ ಪ್ರತಿ ವರ್ಷ 2 ಕೋಟಿ ಅಂದರೇ, 10 ವರ್ಷಕ್ಕೆ 20 ಕೋಟಿ ಉದ್ಯೋಗಗಳು ಸೃಷ್ಟಿಯಾಗಿದ್ದರೇ, ನಮ್ಮ ದೇಶ ಚೈನಾ, ಅಮೆರಿಕಾ ದೇಶಗಳನ್ನು ಮೀರಿಸುವ ವೇಗದಲ್ಲಿ ಆಗುತ್ತಿತ್ತು ಎಂದರು