ಬೆಂಗಳೂರು ಉತ್ತರ: ಪಾರ್ಕಿಂಗ್ ವಿಚಾರಕ್ಕೆ ಪೊಲೀಸರಿಗೆ ಅವಾಚ್ಯ ಶಬ್ದ ಬಳಕೆ: ಇಬ್ಬರನ್ನ ಬಂಧಿಸಿದ ಯಲಹಂಕ ಪೊಲೀಸರು
ಯಲಹಂಕದಲ್ಲಿ ಪಾರ್ಕಿಂಗ್ ವಿಚಾರಕ್ಕೆ ಪೊಲೀಸರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಮಹಿಳೆ ಸೇರಿದಂತೆ ಮತ್ತೊರ್ವನನ್ನ ಬಂದಿಲಾಗಿದೆ. ಯಲಹಂಕದಲ್ಲಿ ನೋ-ಪಾರ್ಕಿಂಗ್‌ನಲ್ಲಿ ವಾಹನ ನಿಲ್ಲಿಸಿದ್ದಕ್ಕೆ ದಂಡ ವಿಧಿಸಿದ ಟ್ರಾಫಿಕ್ ಪೊಲೀಸರನ್ನು ಮಹಿಳೆ ಹಿರಲ್ ವ್ಯಾಸ್ ಮತ್ತು ಮೊಹಮ್ಮದ್ ಸರ್ಬಾನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಇಬ್ಬರನ್ನೂ ಶುಕ್ರವಾರ ಸಂಜೆ 4 ಗಂಟೆಗೆ ಬಂಧಿಸಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.