ರಾಯಚೂರು ನಗರದಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಜಿಲ್ಲಾ ಕಾರ್ಯನಿವಾಹಕ ಅಧಿಕಾರಿಗಳಾದ ಈಶ್ವರ ಕುಮಾರ್ ಕಾಂದೂ ಅವರು ಶುಕ್ರವಾರ 11 ಗಂಟೆಗೆ ಭೇಟಿ ನೀಡಿ ಆಸ್ಪತ್ರೆಯಲ್ಲಿನ ಮೂಲಭೂತ ಬಗ್ಗೆ ಪರಿಶೀಲಿಸಿದರು. ಆಸ್ಪತ್ರೆಯ ನಾನಾ ವಾರ್ಡ್ಗಳಿಗೆ ಓಡಾಡಿ ಭಾಣಂತಿಯರ ಮತ್ತು ಶಿಶುಗಳ ಯೋಗಕ್ಷೇಮ ವಿಚಾರಿಸಿದರು. ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳು ಸಿಗುತ್ತಿವೆಯಾ ಎಂಬ ಬಗ್ಗೆ ಮಾಹಿತಿ ಪಡೆದರು. ನಂತರ ಸಿಬ್ಬಂದಿಗಳಿಗೆ ಉತ್ತಮ ಚಿಕಿತ್ಸಾ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದರು.