ಹುಬ್ಬಳ್ಳಿ: ರಾಜ್ಯದಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಳ ಕುರಿತು ತನಿಖೆಗೆ ಎಸ್ಐಟಿ ರಚನೆಯಾಗಬೇಕು. ಬಡವರು, ಎಸ್.ಸಿ., ಎಸ್.ಟಿ. ಮಕ್ಕಳೇ ಇರುವ ಹಾಸ್ಟೆಲ್ ಗಳಲ್ಲಿ ಈ ಪ್ರಕರಣಗಳು ಹೆಚ್ಚಾಗಿ ನಡೀತಿವೆ ಎಂದು ಬಿಜೆಪಿ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಮಂಜುಳಾ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದಲ್ಲಿ ಇದರ ಪ್ರಮಾಣ ಹೆಚ್ಚಿದೆ. ಎಲ್ಲ ಬಾಲಕಿಯರ ಹಾಸ್ಟೆಲ್ ಗಳಲ್ಲಿ ಪುರುಷರೇ ವಾರ್ಡನ್ ಗಳಿದ್ದಾರೆ. ಹಾಸ್ಟೆಲ್ ಗಳಲ್ಲಿ ಬಾಲಕಿಯರು ಗರ್ಭಿಣಿಯರಾಗ್ತಿರೋ ಪ್ರಕರಣವನ್ನು ಎಸ್ ಐಟಿ ಗೆ ವಹಿಸಿ ಎಂದರು.