ಹೆಗ್ಗಡದೇವನಕೋಟೆ: ಪ್ರಚಾರಕ್ಕಾಗಿ ಹೆಚ್ ಡಿ ಕೋಟೆಗೆ ಸಿಎಂ ಸಿದ್ದರಾಮಯ್ಯ ಆಗಮನ ಹಿನ್ನೆಲೆ ಸ್ಥಳ ಪರಿಶೀಲಿಸಿದ ಶಾಸಕ ಅನಿಲ್ ಚಿಕ್ಕಮಾದು
ಚಾಮರಾಜನಗರ ಲೋಕಸಭಾ ಕ್ಷೇತ್ರದ ಚುನಾವಣೆಯ ಹಿನ್ನೆಲೆ ಪ್ರಚಾರಕ್ಕಾಗಿ ಎಚ್.ಡಿ. ಕೋಟೆ ವಿಧಾನಸಭಾ ಕ್ಷೇತ್ರದ ಹೆಚ್ .ಡಿ. ಕೋಟೆ ಪಟ್ಟಣಕ್ಕೆ ದಿನಾಂಕ 12/04/24 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಬೃಹತ್ ಸಮಾವೇಶಕ್ಕೆ ಆಗಮಿಸಲಿದ್ದು, ಈ ಸಂಬಂಧ ಸಮಾವೇಶ ನಡೆಯುವ ಸ್ಥಳವನ್ನು ಶಾಸಕ ಅನಿಲ್ ಚಿಕ್ಕಮಾದು ಶನಿವಾರ ಸಂಜೆ ಐದರ ಸಮಯದಲ್ಲಿ ಪರಿಶೀಲನೆಯನ್ನು ನಡೆಸಿದರು. ಈ ವೇಳೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳುವಂತೆ ಪೊಲೀಸ್ ಸಿಬ್ಬಂದಿಗೆ ತಿಳಿಸಲಾಯಿತು. ಈ ಸಂದರ್ಭದಲ್ಲಿ ಮೈಮುಲ್ ನಿರ್ದೇಶಕ ಈರೇಗೌಡ, ಪುರಸಭಾ ಸದಸ್ಯ ಎಚ್.ಸಿ. ನರಸಿಂಹಮೂರ್ತಿ, ಮಧು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಏಜಾದ್ ಪಾಷಾ, ಮುಖಂಡರಾದ ಮರಿದೇವಯ್ಯ ಇದ್ದರು.