ಇಂದಿನಿಂದ ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆ ಪ್ರಾರಂಭ: ಎಎಸ್ಪಿ ವೆಂಕಟೇಶ್ ಪ್ರಸನ್ನ ಭೇಟಿ, ಪರಿಶೀಲನೆ ಇಂದಿನಿಂದ ಇತಿಹಾಸ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದನಗಳ ಜಾತ್ರೆ ಪ್ರಾರಂಭವಾಗಿದೆ. ಈ ಹಿನ್ನೆಲೆ ಈಗಾಗಲೇ ರೈತರಿಂದ ಪೂರ್ವ ಸಿದ್ಧತೆ ನಡೆಸಿಕೊಳ್ಳಲಾಗಿದೆ. ಹೋರಿಗಳ ಮಾರಾಟ ಮತ್ತು ಪ್ರದರ್ಶನಕ್ಕೆ ದಿಬ್ಬ, ಶೆಡ್, ಪೆಂಡಾಲ್ ಗಳ ನಿರ್ಮಾಣ ಕಾರ್ಯ ನಡೆದಿದ್ದು, ಹೋರಿಗಳನ್ನು ತಂದು ಮಾರಾಟ ಹಾಗೂ ಪ್ರದರ್ಶನಕ್ಕೆ ಇರಿಸಲಾಗಿದೆ.... ಮುಂಗಾರಿನಲ್ಲಿ ಮಳೆ ಆಶ್ರಯದಲ್ಲಿ ಬೆಳೆಯಲಾಗುವ ಬೆಳೆಗಳ ಕೊಯ್ಲು ಮುಕ್ತಾಯವಾದ ನಂತರ ಪ್ರಥಮ ಬಾರಿಗೆ ನಡೆಯುವ ಘಾಟಿ ಸುಬ್ರಹ್ಮಣ್ಯ ಜಾತ್ರೆಯಲ್ಲಿ ಕೃಷಿ ಕೆಲಸಕ್ಕೆ ಬೇಕಾಗುವ ಹೋರಿಗಳನ್ನು ಖರೀದಿಸಲು ರಾಜ್ಯದ