ಕುಮಟಾ ಪಟ್ಡಣದಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗದ ಆಡಳಿತ ಉತ್ತರ ಕನ್ನಡ ಮತ್ತು ಜಿಲ್ಲಾ ಸರ್ಕಾರಿ ನೌಕರರಿಗಾಗಿ ಆಯೋಜಿಸಲಾಗಿದ್ದ ದ್ವಿತೀಯ ವರ್ಷದ ಜಿಲ್ಲಾ ಮಟ್ಟದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯು ರವಿವಾರ ಮುಕ್ತಾಯಗೊಂಡಿತು. ಈ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಶಾಸಕ ದಿನಕರ ಶೆಟ್ಟಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ಪಂದ್ಯಾವಳಿಯಲ್ಲಿ ಜಯಗಳಿಸಿದ ವಿಜೇತ ತಂಡಕ್ಕೆ ಸಂಜೆ 7.30 ರ ಸುಮಾರು ಬಹುಮಾನ ವಿತರಿಸಿದರು.