ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ನಗರದಲ್ಲಿ ಸಿಎಂ ಸಿದ್ದರಾಮಯ್ಯರಿಂದ ರಾಷ್ಟ್ರ ಧ್ವಜಾರೋಹಣ
ಕಲಬುರಗಿ : 78 ನೇ ಕಲ್ಯಾಣ ಕರ್ನಾಟಕ ಉತ್ಸವ ದಿನದ ಅಂಗವಾಗಿ ಕಲಬುರಗಿ ನಗರದಲ್ಲಿ ಸಿಎಂ ಸಿದ್ದರಾಮಯ್ಯನವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ್ದಾರೆ.. ಸೆಪ್ಟೆಂಬರ್ 17 ರಂದು ಬೆಳಗ್ಗೆ 9 ಗಂಟೆಗೆ ನಗರದ ಡಿಎಆರ್ ಪೊಲೀಸ್ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಇನ್ನೂ ಇದೇ ವೇಳೆ ವಿವಿಧ ಪೊಲೀಸ್ ತುಕಡಿಗಳಿಂದ ಸಿಎಂ ಸಿದ್ದರಾಮಯ್ಯನವರು ಗೌರವ ವಂದನೆ ಸ್ವೀಕರಿಸಿದರು.