ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಬೆಂಗಳೂರು ಕೇಂದ್ರ ನಗರ ಪಾಲಿಕೆ ವತಿಯಿಂದ ಗುರುವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಜಿಬಿಎ ಕಚೇರಿಯಲ್ಲಿ ಪೌರಕಾರ್ಮಿಕರ ಪಿತಾಮಹ ಶ್ರೀ ಐ.ಪಿ.ಡಿ ಸಾಲಪ್ಪ ರವರ 96ನೇ ವರ್ಷದ ಜನ್ಮ ದಿನಾಚರಣೆ ಪ್ರಯುಕ್ತ ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ರವರು ಶ್ರೀ ಐ.ಪಿ.ಡಿ. ಸಾಲಪ್ಪ ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಭಾವಚಿತ್ರಕ್ಕೆ ಪುಷ್ಪನಮನ ಅರ್ಪಿಸಿದರು. ಈ ವೇಳೆ ವಿಶೇಷ ಆಯುಕ್ತರಾದ ಡಾ: ಕೆ. ಹರೀಶ್ ಕುಮಾರ್, ಬೆಂ.ಘ.ನಿ ನಿಯಮಿತದ ಸಿಇಓ ಕರೀಗೌಡ, ಕೇಂದ್ರ ನಗರ ಪಾಲಿಕೆ ಅಪರ ಆಯುಕ್ತರಾದ ದಲ್ಜಿತ್ ಕುಮಾರ್ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು.