ಮೊಳಕಾಲ್ಮುರು:-ಸಮಾಜ ಪರಿವರ್ತನ ವೇದಿಕೆಯಿಂದ ಮೊಳಕಾಲ್ಮುರು ಪಟ್ಟಣದಲ್ಲಿ ಶನಿವಾರ ರಾತ್ರಿ 8:30ಕ್ಕೆ ಸಂವಿಧಾನ ಶಿಲ್ಪಿ ಡಾ ಬಿಆರ್ ಅಂಬೇಡ್ಕರ್ ಪರಿನಿಬ್ಬಾಣ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಪಟ್ಟಣದ ಕೆಇಬಿ ಸರ್ಕಲ್ ನಿಂದ ಮೇಣದ ಬತ್ತಿ ಹಿಡಿದ ಯುವಕ ಯುವತಿಯರು ಮೊಂ ಬತ್ತಿ ಬೆಳಕಿನಲ್ಲಿ ಅಂಬೇಡ್ಕರ್ ಭಾವಚಿತ್ರ ಹಿಡಿದು ಜೈ ಭೀಮ್ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆಯಲ್ಲಿ ಸಾಗಿದರು. ಮೆರವಣಿಗೆಯು ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಸಮಾವೇಶಗೊಂಡಿತು.ನಂತರ ವೇದಿಕೆ ಕಾರ್ಯಕ್ರಮ ನಡೆಯಿತು.