ಬೆಂಗಳೂರು ಉತ್ತರ: ಮೇ. 7, 8ನೇ ತಾರೀಖಿನವರೆಗೂ ಭಾರೀ ಮಳೆ ಮುನ್ಸೂಚನೆ, ಬೆಂಗಳೂರಿನಲ್ಲಿ ಆರೆಂಜ್ ಅಲರ್ಟ್
ಬೆಂಗಳೂರಿಗೆ ಪೂರ್ವ ಮುಂಗಾರು ಎಫೆಕ್ಟ್ ತಾಗಲಿದೆ ಅಂತಾ ಹವಮಾನ ಇಲಾಖೆ ವರದಿ ಮಾಡಿದೆ. ಬೆಂಗಳೂರಿನಲ್ಲಿ ಮುಂದಿನ ಒಂದು ವಾರ ಭಾರೀ ಮಳೆ ಸುರಿಯಲಿದ್ದು ಮೇ 7, 8ರಂದು ಬೆಂಗಳೂರಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮೇ 6 ಮತ್ತು ಮೇ 8 ರಂದು ಗುಡುಗು-ಸಿಡಿಲಿನಿಂದ ಕೂಡಿದ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದ್ದು ಎರಡು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಣೆ ಮಾಡಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲೂ ಕೂಡ ಭಾರೀ ಮಳೆಯಾಗುವ ಸಾಧ್ಯತೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.