ಕುಮಟಾ: ಪಟ್ಟಣದಲ್ಲಿ ಕಳ್ಳತನ ಮಾಡಿದ್ದ ಆರೋಪಿ ಪೊಲೀಸರಿಂದ ಎಸ್ಕೇಪ್
ಕಳ್ಳತನ ಪ್ರಕರಣದ ಆರೋಪಿಯೊಬ್ಬ ಪೊಲೀಸರಿಂದ ತಪ್ಪಿಸಿಕೊಂಡ ಘಟನೆ ಶನಿವಾರ ಸಂಭವಿಸಿದ್ದು ಈ ಬಗ್ಗೆ ಸಂಜೆ 4ಕ್ಕೆ ಮಾಧ್ಯಮಕ್ಕೆ ಮಾಹಿತಿ ಲಭ್ಯವಾಗಿದೆ. ಪಟ್ಟಣದ ಗಿಬ್ ಸರ್ಕಲ್ ಬಳಿಯ ಬ್ಯಾಟರಿ ಅಂಗಡಿಯಲ್ಲಿ ಕಳ್ಳತನ ಮಾಡಿದ್ದಕ್ಕೆ ಕುಮಟಾದಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ್ದರು. ಪೊಲೀಸರು ಆರೋಪಿಗಳ ಮೆಡಿಕಲ್ ಮಾಡಿಸಿ ವಾಪಸ್ಸಾಗುವ ಸಂದರ್ಭದಲ್ಲಿ ಆಸ್ಪತ್ರೆಯ ಕಂಪೌಂಡ್ ಹಾರಿ ನಾಪತ್ತೆಯಾಗಿದ್ದಾನೆ. ಪೊಲೀಸರಿಂದ ತಪ್ಪಿಸಿಕೊಂಡ ಆರೋಪಿಯ ಪತ್ತೆ ಕಾರ್ಯಾಚರಣೆ ನಡೆಸಿದ್ದಾರೆ.