ಸಾಲಿಗ್ರಾಮ ತಾಲ್ಲೂಕಿನ ಆರಾದನಹಳ್ಳಿ ಗ್ರಾಮದಲ್ಲಿ ಶ್ರೀ ಲಕ್ಷ್ಮಿ ದೇವಿ ನರಸಿಂಹ ಸ್ವಾಮಿ ದೇವರ ಉತ್ಸವ ಭಾನುವಾರ ಅದ್ದೂರಿಯಾಗಿ ಜರುಗಿತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ದೇವಿಯನ್ನು ಮೆರವಣಿಗೆ ಮಾಡಲಾಗಿದ್ದು ಸಾವಿರಾರು ಭಕ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಗ್ರಾಮದ ಎಲ್ಲಾ ಸಮಾಜದ ಮುಖಂಡರು ಸೇರಿ ಆಚರಿಸಿದ ಈ ಹಬ್ಬದಲ್ಲಿ ಸಮಿತಿಯಿಂದ ಎಲ್ಲಾ ಭಕ್ತರಿಗೆ ಅನ್ನದಾಸೋಹ ಆಯೋಜಿಸಲಾಗಿತ್ತು. ಭಾನುವಾರ ರಾತ್ರಿ ಇಡೀ ದೇವರ ಉತ್ಸವ ಮೆರವಣಿಗೆ ನಡೆಯಲಿದೆ.