ಹುಣಸಗಿ: ಹುಣಸಗಿ ಪಟ್ಟಣದಿಂದ ಕೆಂಭಾವಿ ಹೋಗುವ ರಸ್ತೆ ಮಧ್ಯದ ಹಳ್ಳ ತುಂಬಿ ಹರಿಯುತ್ತಿದ್ದು ರಸ್ತೆ ಸಂಚಾರ ಬಂದ್
ಯಾದಗಿರಿ ಜಿಲ್ಲೆಯ ಜನತಾ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ವಿವಿಧ ಕಡೆಗಳಲ್ಲಿ ಭಾರಿ ಅವಾಂತರ ಸೃಷ್ಟಿಯಾಗುತ್ತಿದ್ದು ಅದರಂತೆ ಹುಣಸಗಿ ಪಟ್ಟಣದಿಂದ ಕೆಂಭಾವಿಗೆ ಹೋಗುವ ಮುಖ್ಯ ರಸ್ತೆಯ ಮಧ್ಯದಲ್ಲಿರುವ ಹಳ್ಳ ತುಂಬಿ ಹರಿಯುತ್ತಿದ್ದು ಶುಕ್ರವಾರ ರಾತ್ರಿಯಿಂದ ರಸ್ತೆ ಸಂಚಾರ ಬಂದ್ ಆಗಿದೆ. ಬಾರಿ ಪ್ರಮಾಣದಲ್ಲಿ ನೀರು ರಸ್ತೆಯ ಮೇಲೆ ಹರಿಯುತ್ತಿರುವುದರಿಂದ ವಾಹನ ಸವಾರರು ಭಯಭೀತರಾಗಿದ್ದಾರೆ. ಸಾರ್ವಜನಿಕರು ಕೂಡ ಈ ರಸ್ತೆಯ ಮೂಲಕ ಹೋಗಲಾಗದೆ ಪರದಾಡುವಂತಾಗಿದೆ. ನಿತ್ಯವೂ ನೂರಾರು ವಾಹನಗಳು ಈ ರಸ್ತೆಯಲ್ಲಿ ಓಡಾಟ ನಡೆಸುತ್ತಿದ್ದು ಸಂಚಾರ ಬಂದ್ ಆಗಿದ್ದರಿಂದಾಗಿ ವಾಹನ ಸವಾರರು ಪರದಾಡುತ್ತಿದ್ದಾರೆ.