ಹೊರನಾಡು ರಸ್ತೆಯಲ್ಲಿ ಗುಂಡಿಗಳ ದರ್ಬಾರ್.! ರಸ್ತೆ ಸ್ಥಿತಿ ಕಂಡು ಅಧಿಕಾರಿಗಳಿಗೆ ಜಡ್ಜ್ ವಾರ್ನಿಂಗ್.!
ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ರಸ್ತೆ ಗುಂಡಿಗಳಿಂದ ವಾಹನ ಸಂಚಾರ ದುಸ್ತರವಾಗಿದೆ. ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ ದೀರ್ಘಕಾಲದಿಂದ ಹದಗೆಟ್ಟಿರುವ ರಸ್ತೆಗಳಿಂದ ವಾಹನ ಸವಾರರು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಹಿಡಿಶಾಪ ಹಾಕಿ ವಾಹನಗಳನ್ನು ಚಾಲನೆ ಮಾಡುವಂತಾಗಿದೆ. ಈ ರಸ್ತೆಯಲ್ಲಿ ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯಕ್ಕೆ ಬಂದ ನ್ಯಾಯಾಧೀಶರು ರಸ್ತೆಯ ಸ್ಥಿತಿಯನ್ನು ಕಂಡು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ವಾರ್ನಿಂಗ್ ಮಾಡಿದ್ದಾರೆ.