ಮಳವಳ್ಳಿ: ಹಲಗೂರಿನ ಚನ್ನಪಟ್ಟಣ ರಸ್ತೆಯಲ್ಲಿರುವ ಹಲಗೂರು ಲಯನ್ಸ್ ಕ್ಲಬ್ ಭವನದಲ್ಲಿ ಹೊಲಿಗೆ ತರಬೇತಿ ಶಿಬಿರಕ್ಕೆ ಚಾಲನೆ
ಮಳವಳ್ಳಿ ತಾಲ್ಲೂಕಿನ ಹಲಗೂರಿನ ಚನ್ನಪಟ್ಟಣ ರಸ್ತೆಯಲ್ಲಿರುವ ಹಲಗೂರು ಲಯನ್ಸ್ ಕ್ಲಬ್ ಭವನದಲ್ಲಿ ಹೊಲಿಗೆ ತರಬೇತಿ ಶಿಬಿರವನ್ನು ಲಯನ್ಸ್ ಕ್ಲಬ್ನ ಪ್ರಾಂತೀಯ ಅಧ್ಯಕ್ಷರಾದ ಐ.ಎನ್. ಸೋಮೇಗೌಡ ಗಿಡಕ್ಕೆ ನೀರು ಹಾಕಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪ್ರಾಂತೀಯ ಅಧ್ಯಕ್ಷರಾದ ಸೋಮೇಗೌಡ ಮಾತನಾಡಿ, ಮಂಡ್ಯ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಗಳಿಸಿರುವ ಹಲಗೂರು ಲಯನ್ಸ್ ಕ್ಲಬ್ ಒಳ್ಳೆಯ ಸೇವೆ ಸಲ್ಲಿಸುತ್ತಿದ್ದು, ಹಲವಾರು ಕಾರ್ಯಕ್ರಮಗಳನ್ನು ನಡೆಸುತ್ತಿದ್ದಾರೆ. ಅದರಲ್ಲಿ ಇಂದು ಮಹಿಳೆಯರಿಗೆ ಹೊಲಿಗೆ ತರಬೇತಿ ಶಿಬಿರವನ್ನು ಪ್ರಾರಂಭಿಸಿರುವುದು ಒಳ್ಳೆಯ ಬೆಳವಣಿಗೆ ಎಂದರು. ಕಾರ್ಯಕ್ರಮದಲ್ಲಿ ವಲಯ ಅಧ್ಯಕ್ಷರಾದ ಚುಕ್ಕೆಗೌಡ, ಹಲೋ ಗುರು ಲಯನ್ಸ್ ಕ್ಲಬ್ ಅಧ್ಯಕ್ಷ ಮನೋಹರ್, ಕಾರ್ಯದ