ಗುಂಡ್ಲುಪೇಟೆ ತಾಲೂಕಿನ ಚಿಕ್ಕತುಪ್ಪೂರು ಗ್ರಾಮದ ಬಳಿ 13.5 ಎಕರೆಯಲ್ಲಿ ಸುಸಜ್ಜಿತ ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್ ನಿರ್ಮಾಣ ಮಾಡಲಾಗುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಹೇಳಿದರು. ಚಿಕ್ಕತುಪ್ಪೂರು ಗ್ರಾಮದ ಬಳಿ ನಿರ್ಮಾಣವಾಗುತ್ತಿರುವ ಡಿ ದೇವರಾಜ ಅರಸು ಟ್ರಕ್ ಟರ್ಮಿನಲ್ ಅನ್ನು ಪರಿವೀಕ್ಷಣೆ ಮಾಡಿ ಬುಧವಾರ ಅವರು ಮಾತನಾಡಿ, ಟ್ರಕ್ ಚಾಲಕರಿಗೆ ಅನುಕೂಲವಾಗಬೇಕು ಎನ್ನುವ ದೃಷ್ಟಿಯಿಂದ ಪಟ್ಟಣಕ್ಕೆ ಹೊಂದಿಕೊಂಡಂತಿರುವ ಚಿಕ್ಕತುಪ್ಪೂರು ಗ್ರಾಮದ ಬಳಿ ಟ್ರಕ್ ಟರ್ಮಿನಲ್ ನಿರ್ಮಾಣ ಮಾಡಲಾಗುತ್ತಿದೆ. 293 ಟ್ರಕ್ ನಿಲ್ಲಲು ಅವಕಾಶ ಮಾಡಿಕೊಡುತ್ತಿದ್ದೆವೆ.43 ಏಜೆಂಟ್ ಆಫೀಸ್,18 ಗೋಡನ್ ಗೆ ಪ್ರಾತಿನಿಧ್ಯ ನೀಡಲಾಗುತ್ತದೆ ಎಂದರು.