ಶಿಕಾರಿಪುರ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ತಾಲ್ಲೂಕಿನ ಕಾಂಗ್ರೆಸ್ ಮುಖಂಡ ಎಸ್.ಪಿ.ನಾಗರಾಜ ಗೌಡ ನೇಮಕ
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಎಸ್.ಪಿ.ನಾಗರಾಜ ಗೌಡ ಅವರನ್ನು ನೇಮಕ ಮಾಡಿ ಮಂಗಳವಾರ ಆದೇಶ ಹೊರಡಿಸಲಾಗಿದೆ. ಶಿಕಾರಿಪುರ ತಾಲ್ಲೂಕಿನ ಕಾಂಗ್ರೆಸ್ ಮುಖಂಡ ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಬಂಡಾಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪ್ರಬಲ ಪೈಪೋಟಿ ನೀಡಿದ್ದರು. ಇದೀಗ ಅವರನ್ನು ಕಾಂಗ್ರೆಸ್ ಪಕ್ಷ ರಾಜ್ಯ ಮಟ್ಟದಲ್ಲಿ ಪ್ರಬಲ ಹುದ್ದೆ ನೀಡಿದೆ.