ಜಗಳೂರು: ಪಟ್ಟಣದಲ್ಲಿ ಪಕ್ಷ ಸೇರ್ಪಡೆ, ಪದಗ್ರಹಣ ಸಮಾರಂಭ
ಪಟ್ಟಣದ ಶಾಸಕರ ಜನಸಂಪರ್ಕ ಕಚೇರಿಯಲ್ಲಿ ಪದಾಧಿಕಾರಿಗಳ ಪದಗ್ರಹಣ, ಪಕ್ಷ ಮರುಸೇರ್ಪಡೆ ಕಾರ್ಯಕ್ರಮ ಭಾನುವಾರ ಹಮ್ಮಿಕೊಳ್ಳಲಾಗಿತ್ತು. ಶಾಸಕ ಬಿ.ದೇವೇಂದ್ರಪ್ಪ ಕಾರ್ಯಕರ್ತರನ್ನು ಬರಮಾಡಿಕೊಂಡರು. ನಂತರ ಮಾತನಾಡಿದ ಅವರು, ಕಾರ್ಯಕರ್ತರು ಪಕ್ಷಕ್ಕೆ ಮರು ಸೇರ್ಪಡೆಯಾಗಿರುವುದು ನಮಗೆ ಆನೆ ಬಲ ತಂದಿದೆ. ಪ್ರಾಮಾಣಿಕವಾಗಿ ಪಕ್ಷ ಸಂಘಟನೆಗೆ ಶ್ರಮಿಸಿರಿ ಎಂದು ಸಲಹೆ ನೀಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಶೀರ್ ಅಹ್ಮದ್, ಕೆಪಿಸಿಸಿ ಎಸ್‌ಟಿ ಘಟಕದ ರಾಜ್ಯಾಧ್ಯಕ್ಷ ಕೆ.ಪಿ. ಪಾಲಯ್ಯ, ಕೆಪಿಸಿಸಿ ಎಸ್‌ಟಿ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಡಿ.ಕೀರ್ತಿಕುಮಾರ, ಮುಖಂಡರು, ಪದಾಧಿಕಾರಿಗಳು ಮತ್ತಿತರರಿದ್ದರು.