ವಿಜಯಪುರ: ರೈತರ ಭೂ ಪರಿಹಾರಕ್ಕಾಗಿ ಸೆ.15ರಂದು ಉಪವಾಸ ಸತ್ಯಾಗ್ರಹ, ನಗರದಲ್ಲಿ ಮಾಜಿ ಸಚಿವ ಎಸ್ ಕೆ ಬೆಳ್ಳುಬ್ಬಿ ಹೇಳಿಕೆ
ಕೃಷ್ಣ ಮೇಲ್ದಂಡೆ ಯೋಜನೆಯ ಮೂರನೇ ಹಂತದ ರೈತರಿಗೆ ಭೂ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಸೆಪ್ಟೆಂಬರ್ 15ರಂದು ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳುತ್ತೇನೆ ಎಂದು ವಿಜಯಪುರದಲ್ಲಿ ಭಾನುವಾರ ಸಾಯಂಕಾಲ 5ಗಂಟೆ ಸುಮಾರಿಗೆ ಮಾಜಿ ಸಚಿವ ಎಸ್ ಕೆ ಬೆಳ್ಳುಬಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ರಾಜ್ಯ ಸರ್ಕಾರ ರೈತರ ಗಳಿಗೆ ಕೇವಲ ಭರವಸೆ ನೀಡುತ್ತಿದ್ದಾರೆ ಆದರೆ ಇಲ್ಲಿಯವರೆಗೂ ಯಾವುದೇ ಭೂ ಪರಿಹಾರ ನೀಡಿಲ್ಲ ಹೀಗಾಗಿ ಕೂಡಲೇ ಸರ್ಕಾರ ಭೂಮಿ ಕಳೆದುಕೊಂಡ ರೈತರಿಗೆ ಒಂದು ಎಕರೆಗೆ 55 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳುತ್ತಿದ್ದೇನೆ ಎಂದು ಹೇಳಿದರು.