ಆಳಂದ: ಮತಗಳ್ಳತನ ಪ್ರಕರಣದಲ್ಲಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್, ಪುತ್ರ ಹರ್ಷಾನಂದ್ಗೆ SIT ನೋಟಿಸ್: ನಿರೀಕ್ಷಣ ಜಾಮೀನಿಗಾಗಿ ಅರ್ಜಿ
ಕಲಬುರಗಿ : ದೇಶದಲ್ಲಿ ಅಲ್ಲೊಲ ಕಲ್ಲೋಲ ಸೃಷ್ಟಿಸಿರೋ ಕಲಬುರಗಿ ಜಿಲ್ಲೆ ಆಳಂದ ವಿಧಾನಸಭೆ ಕ್ಷೇತ್ರದಲ್ಲಿ ಮತಗಳ್ಳತನಕ್ಕೆ ಯತ್ನ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ, ಆಳಂದ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಮತ್ತು ಪುತ್ರ ಹಾಗೂ ಜಿ ಪಂ ಮಾಜಿ ಉಪಾಧ್ಯಕ್ಷ ಹರ್ಷಾನಂದ ಗುತ್ತೇದಾರ್ಗೆ ಜನಪ್ರತಿನಿಧಿಗಳ ನ್ಯಾಯಾಲಯವು ನೋಟಿಸ್ ನೀಡಿದೆ. ಅ29 ರಂದು ರಾತ್ರಿ 9 ಗಂಟೆಗೆ ಮಾಹಿತಿ ಲಭ್ಯವಾಗಿದೆ.. ಇನ್ನೂ ನೋಟಿಸ್ ಜಾರಿ ಮಾಡುತ್ತಿದ್ದಂತೆ ಸುಭಾಷ್ ಗುತ್ತೇದಾರ್ ನಿರೀಕ್ಷಣ ಜಾಮೀನಿಗಾಗಿ ಅರ್ಜಿ ಸಲ್ಲಿಸಿದಾರೆಂಬ ಮಾಹಿತಿ ಲಭ್ಯವಾಗಿದೆ