ಬೆಂಗಳೂರು, ಲೋಕಭವನದಲ್ಲಿ ಇಂದು ಪ್ರತಿಪಕ್ಷ ನಾಯಕ ಶ್ರೀ ಆರ್. ಅಶೋಕ್ ಮತ್ತು ವಿಧಾನ ಪರಿಷತ್ ವಿಪಕ್ಷ ನಾಯಕ ಶ್ರೀ ಎನ್.ಸ್ವಾಮಿ ಚಾಲವಾಡಿ ಅವರ ನೇತೃತ್ವದ ಬಿಜೆಪಿ ನಿಯೋಗವು ರಾಜ್ಯಪಾಲರಾದ ಶ್ರೀ ಥಾವರ್ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಿತು. ಕಾಂಗ್ರೆಸ್ ಸರ್ಕಾರದ ದ್ವೇಷ ಭಾಷಣ ಮಸೂದೆಗೆ ಅಂಗೀಕಾರ ನೀಡಬಾರದು, ವಸತಿ ಯೋಜನೆಯ ಆಶ್ರಯ ಮನೆಗಳನ್ನು ಅಕ್ರಮ ವಲಸಿಗರಿಗೆ ನೀಡದಂತೆ ತಡೆಯಬೇಕು ಹಾಗೂ ಬಿಜೆಪಿ ಜನಪ್ರತಿನಿಧಿಗಳಿಗೆ ಕಾಂಗ್ರೆಸ್ ಪದಾಧಿಕಾರಿಗಳು ನೀಡಿರುವ ಬೆದರಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ನಿಯೋಗವು ಆಗ್ರಹಿಸಿತು. ಈ ಸಂದರ್ಭದಲ್ಲಿ ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ಪಕ್ಷದ ಹಿರಿಯ ನಾಯಕರು ಉಪಸ್ಥಿತರಿದ್ದರು.