ರಟ್ಟೀಹಳ್ಳಿ: ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ತೆಕ್ಕೆಗೆ ಜಾರಿದ ಪಟ್ಟಣ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ; ಕಾಂಗ್ರೆಸ್ ಗೆ ಭಾರಿ ಮುಖಭಂಗ
ಜಿಲ್ಲೆಯಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ರಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಕೊನೆಗೂ ಬಿಜೆಪಿ ತೆಕ್ಕೆಗೆ ಜಾರಿದೆ. ಪ್ರಥಮ ಅಧ್ಯಕ್ಷರಾಗಿ ರವೀಂದ್ರ ಮುದಿಯಪ್ಪನವರ, ಉಪಾಧ್ಯಕ್ಷರಾಗಿ ಶಿವಕುಮಾರ ಉಪ್ಪಾರ ಆಯ್ಕೆಯಾದರು. ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಮುಖಭಂಗವಾಗಿದೆ.