ದೊಡ್ಡಬಳ್ಳಾಪುರ: ನಗರದ ರೈಲ್ವೆ ಸ್ಟೇಷನ್ ವೃತ್ತದಲ್ಲಿ ಸುವರ್ಣ ಕರ್ನಾಟಕ ಜನಶಕ್ತಿ ವೇದಿಕೆವತಿಯಿಂದ ಕನ್ನಡ ರಾಜ್ಯೋತ್ಸವ ಅದ್ದೂರಿಯಾಗಿ ನಡೆಯಿತು
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಸುವರ್ಣ ಕರ್ನಾಟಕ ಜನಶಕ್ತಿ ವೇದಿಕೆ ತಾಲೂಕು ಘಟಕದ ವತಿಯಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಸುವರ್ಣ ಕರ್ನಾಟಕ ಜನಶಕ್ತಿ ವೇದಿಕೆಯ ರಾಜ್ಯಾಧ್ಯಕ್ಷರಾದ ನಾಗೇನಹಳ್ಳಿ ಕೃಷ್ಣಮೂರ್ತಿಯವರು ಉದ್ಘಾಟಿಸಿದರು