ಚಾಮರಾಜನಗರ ತಾಲೂಕಿನ ಮರಿಯಾಲ ಗ್ರಾಮದಲ್ಲಿ ಶ್ರೀ ಮುರುಘರಾಜೇಂದ್ರಸ್ವಾಮಿ ಮಹಾ ಸಂಸ್ಥಾನ ಮಠದಲ್ಲಿ ಬಸವೋತ್ಸವ ಮುರುಘರಾಜೇಂದ್ರಸ್ವಾಮೀಜಿ ಅವರ 109 ನೇ ವರ್ಷದ ಸ್ಮರಣೋತ್ಸವ, ಮಹಾಂತ ಮಂಟಪದ ಉದ್ಘಾಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಬೀದರ್ ಜಿಲ್ಲೆಯ ಬಾಲ್ಕಿ ಹಿರೇಮಠ ಮಹಾಸಂಸ್ಥಾನದ ಡಾ.ಶ್ರೀ ಬಸವಲಿಂಗಪಟ್ಟ ದೇವರು ಕಾರ್ಯಕ್ರಮ ಉದ್ಘಾಟಿಸಿ. ಬಳಿಕ ಮಾತನಾಡಿದ ಅವರು ಪ್ರತಿಯೊಬ್ಬರು ಬಸವಣ್ಣನವರ ವಚನಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಪ್ರಜೆಗಳಾಗಿ ಬೆಳೆಯ ಬೇಕು ಎಂದರು