ಜಮಖಂಡಿ: ನಗರದಲ್ಲಿ ಯಶಸ್ವಿಯಾಗಿ ಜರುಗಿದ ಕಾನೂನು ಅರಿವು ನೆರವು ಕಾರ್ಯಕ್ರಮ
ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರಸಭೆ ಕಾರ್ಯಾಲಯದ ಸಭಾಭವನದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬಾಗಲಕೋಟೆ ತಾಲೂಕು ಕಾನೂನು ಸೇವಾ ಸಮಿತಿ ಜಮಖಂಡಿ, ನ್ಯಾಯವಾದಿಗಳ ಸಂಘ ಜಮಖಂಡಿ, ನಗರ ಸಭೆ ಜಮಖಂಡಿ, ಇವರಗಳ ಸಂಯುಕ್ತ ಆಶ್ರಯದಲ್ಲಿ ತಂದೆ ತಾಯಿಯರ ಮತ್ತು ಹಿರಿಯ ನಾಗರಿಕರ ಪಾಲನೆ-ಪೋಷಣೆ ಮತ್ತು ಕಲ್ಯಾಣ ಅಧಿನಿಯಮ, 2007 ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.