ಬೆಂಗಳೂರು ಉತ್ತರ: ಪ್ರಧಾನಿಗಳ ಅಪೇಕ್ಷೆಯಂತೆ ನಗರದಲ್ಲಿ 'ಹರ್ ಘರ್ ತಿರಂಗಾ' ಅಭಿಯಾನ
ಬುಧವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಮಲ್ಲೇಶ್ವರಂ ನಲ್ಲಿ ಹರ್ ಘರ್ ತಿರಂಗಾ ಅಭಿಯಾನ ಹಿನ್ನೆಲೆ ಕಾರ್ಯಕರ್ತರ ಮನೆಗಳಿಗೆ ಭೇಟಿ ನೀಡಿ ತ್ರಿವರ್ಣ ಧ್ವಜ ನೀಡಿದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು, ಪ್ರಧಾನಿ ಮೋದಿ ಹಾಗೂ ನಡ್ಡ ಅವರ ಅಪೇಕ್ಷೆಯಂತೆ ಸ್ವಾತಂತ್ರ ದಿನಾಚರಣೆ ಹಿನ್ನೆಲೆ ಪ್ರತಿಯೊಂದು ಮನೆ ಮೇಲೆ ತ್ರಿವರ್ಣ ಧ್ವಜ ಹಾರಿಸಬೇಕು. ಪ್ರತಿಯೊಬ್ಬರಿಗೂ ದೇಶದ ಬಗ್ಗೆ ಶ್ರದ್ದೆ, ಗೌರವ ಬರಬೇಕು ಎಂಬ ಸದುದ್ದೇಶ ಇಟ್ಕೊಂಡು ಬೆಂಗಳೂರು ಸೇರಿದಂತೆ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬಿಜೆಪಿ ಕಾರ್ಯಕರ್ತರ ಮನೆಗಳಿಗೆ ಭೇಟಿ ಕೊಟ್ಟು ಎಲ್ಲರ ಮನೆ ಮೇಲೆ ತ್ರಿವರ್ಣ ಧ್ವಜ ಹಾರಿಸಲು, 'ಹರ್ ಘರ್ ತಿರಂಗಾ' ಅಭಿಯಾನ ನಡೆಯುತ್ತಿದೆ.