ಕೃಷ್ಣರಾಜಪೇಟೆ: ಮಾಂಬಹಳ್ಳಿ ಗ್ರಾಮದಲ್ಲಿ ಗೃಹಿಣಿಯೊಬ್ಬರಿಗೆ ಕಬ್ಬಿಣದ ರಾಡಿನಿಂದ ಮಾರಣಾಂತಿಕ ಹಲ್ಲೆ
ಗೃಹಿಣಿಯೊಬ್ಬರಿಗೆ ಕಬ್ಬಿಣದ ರಾಡಿನಿಂದ ಮಾರಣಾಂತಿಕ ಹಲ್ಲೆ ನಡೆಸಿ, ಮೈಮೇಲೆ ಪೆಟ್ರೋಲ್ ಸುರಿದು ಜೀವಂತ ದಹನ ಮಾಡಲು ಯತ್ನಿಸಿರುವ ಘಟನೆ ಕೆ.ಆರ್.ಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಮಾಂಬಹಳ್ಳಿ ಗ್ರಾಮದಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಮಾಂಬಹಳ್ಳಿ ಗ್ರಾಮದಲ್ಲಿ ವಕೀಲರಾಗಿದ್ದ ದಿ.ಕುಚೇಲೇಗೌಡ ಅವರ ಪತ್ನಿ 41 ವರ್ಷದ ಸುಲೋಚನ ಗಂಭೀರವಾಗಿ ಗಾಯಗೊಂಡು ಕೆ.ಆರ್.ಪೇಟೆ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.